ಹೈದರಾಬಾದಿನ ನಿಜಾಮ ಸ್ವಾತಂತ್ರ್ಯಾನಂತರ ಭಾರತದೊಂದಿಗೆ ವಿಲೀನಗೊಳ್ಳಲಿಚ್ಚಿಸದೆ ಲೋಡುಗಟ್ಟಲೆ ಚಿನ್ನಾಭರಣಗಳು ಮತ್ತು ಇತರ ಅಮೂಲ್ಯ ಆಸ್ತಿಯೊಂದಿಗೆ ದೇಶದಿಂದ ಪರಾರಿಯಾಗಲು ಪ್ರಯತ್ನಿಸುತ್ತಾನೆ. ಆದರೆ ಭಾರತ ಸರ್ಕಾರದ ಬಿಗಿ ನಿಯಂತ್ರಣದಿಂದಾಗಿ ಅದು ಸಾಧ್ಯವಾಗುವುದಿಲ್ಲ. ಹಾಗಾದರೆ ನಿಜಾಮ ಒಯ್ಯಲೆತ್ನಿಸಿದ ಅಪಾರನಿಧಿ ಏನಾಯಿತು? ಇದರ ಹುಡುಕಾಟವೆ ‘ಏಳು ರೊಟ್ಟಿಗಳ’ ಕೇಂದ್ರ ವಸ್ತು.
